You are currently viewing ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪಾಲಿಸಿ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ | Recruitment in Raichor consultant post

ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪಾಲಿಸಿ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ | Recruitment in Raichor consultant post

Recruitment in raichor consultant post

Recruitment in Raichor consultant post: ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯವು ಒಳ ಗುತ್ತಿಗೆ ಆಧಾರದ ಮೇಲೆ (Insource Basis) ಪಾಲಿಸಿ ಕನ್ಸಲ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹುದ್ದೆಯ ವಿವರಗಳು

  • ಹುದ್ದೆಯ ಹೆಸರು: ಪಾಲಿಸಿ ಕನ್ಸಲ್ಟೆಂಟ್ (Policy Consultant)
  • ಹುದ್ದೆಗಳ ಸಂಖ್ಯೆ: ಒಂದು (1)
  • ಮಾಸಿಕ ವೇತನ: ರೂ. 50,000/- (ಏಕೀಕೃತ ಸಂಭಾವನೆ)
  • ಹುದ್ದೆಯ ಅವಧಿ: ಒಂದು ವರ್ಷ. ಅಭ್ಯರ್ಥಿಯ ಕಾರ್ಯಕ್ಷಮತೆ ತೃಪ್ತಿಕರವಾಗಿದ್ದರೆ, ಜಿಲ್ಲಾಧಿಕಾರಿಗಳ ನಿರ್ಣಯದಂತೆ ಮುಂದಿನ ವರ್ಷಕ್ಕೆ ಮುಂದುವರಿಸಲಾಗುವುದು.
  • ಆದ್ಯತೆ: ರಾಯಚೂರು ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಹತಾ ಮಾನದಂಡ

  • ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ (MBA) ಅಥವಾ ಪಬ್ಲಿಕ್ ಪಾಲಿಸಿಯಲ್ಲಿ ಸ್ನಾತಕೋತ್ತರ ಪದವಿ (MPP) ಹೊಂದಿರಬೇಕು.
  • ಅನುಭವ: ಸಂಶೋಧನೆ ಮತ್ತು ಪಾಲಿಸಿ ವಿಶ್ಲೇಷಣೆಯಲ್ಲಿ ಕನಿಷ್ಠ 2 ವರ್ಷಗಳ ಸಂಬಂಧಿತ ಅನುಭವ ಕಡ್ಡಾಯವಾಗಿದೆ. ಸರ್ಕಾರಿ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸಿದ ಅನುಭವಕ್ಕೆ ಆದ್ಯತೆ ನೀಡಲಾಗುವುದು. ಡೇಟಾ ವಿಶ್ಲೇಷಣೆ ಸಾಫ್ಟ್‌ವೇರ್ ಜ್ಞಾನವು ಹೆಚ್ಚುವರಿ ಅರ್ಹತೆಯಾಗಿರುತ್ತದೆ.
  • ವಯೋಮಿತಿ: ಗರಿಷ್ಠ 45 ವರ್ಷಗಳು.

ಅರ್ಜಿ ಸಲ್ಲಿಸುವ ವಿಧಾನ

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ರಾಯಚೂರು ಜಿಲ್ಲೆಯ ಅಧಿಕೃತ ವೆಬ್‌ಸೈಟ್

https://raichur.nic.in ನಿಂದ ದಿನಾಂಕ 08/07/2025 ರಿಂದ 17/07/2025 ರವರೆಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಖುದ್ದಾಗಿ ಅಥವಾ ಅಂಚೆ ಮೂಲಕ ಕೆಳಗೆ ನೀಡಲಾದ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನೆಲ ಮಹಡಿ, ಕೊಠಡಿ ಸಂಖ್ಯೆ-ಸಿ-15, ಏಕ್ಲಾಸ್ಪುರ್, ರಾಯಚೂರು-584101

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಸಮಯ: 17/07/2025, ಸಂಜೆ 5:30 ರೊಳಗೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಅಭ್ಯರ್ಥಿಯ ಸ್ವ-ವಿವರದೊಂದಿಗೆ, ಈ ಕೆಳಗಿನ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು:

  • ಎಲ್ಲಾ ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು
  • ಹಿಂದಿನ ನೇಮಕಾತಿ ಆದೇಶಗಳು (ಅನ್ವಯಿಸಿದಲ್ಲಿ)
  • ಅನುಭವ ಪ್ರಮಾಣ ಪತ್ರಗಳು
  • ಒಂದು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿ

ಆಯ್ಕೆ ಪ್ರಕ್ರಿಯೆ ಮತ್ತು ಷರತ್ತುಗಳು

  • ನಿಗದಿತ ವಿದ್ಯಾರ್ಹತೆ ಮತ್ತು ಅನುಭವದಲ್ಲಿ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಯನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.
  • ಆಯ್ಕೆ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಶಿಫಾರಸು ತಂದಲ್ಲಿ, ಅರ್ಜಿಯನ್ನು ತಿರಸ್ಕರಿಸಲಾಗುವುದು ಮತ್ತು ಕಾನೂನು ಕ್ರಮ ಜರುಗಿಸಲಾಗುವುದು.
  • ಆಯ್ಕೆಯಾದ ಅಭ್ಯರ್ಥಿಯು ಕಚೇರಿಯೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
  • ನೇಮಕಾತಿ ಪ್ರಕ್ರಿಯೆಯನ್ನು ಯಾವುದೇ ಕಾರಣ ನೀಡದೆ ಮುಂದೂಡುವ ಅಥವಾ ರದ್ದುಗೊಳಿಸುವ ಸಂಪೂರ್ಣ ಹಕ್ಕನ್ನು ನೇಮಕಾತಿ ಪ್ರಾಧಿಕಾರವು ಹೊಂದಿರುತ್ತದೆ.
  • ನಿಗದಿತ ದಿನಾಂಕ ಮತ್ತು ಸಮಯದ ನಂತರ ಸ್ವೀಕರಿಸಿದ ಅರ್ಜಿಗಳಿಗೆ ಕಚೇರಿಯು ಜವಾಬ್ದಾರಿಯಾಗಿರುವುದಿಲ್ಲ.

 

ಪ್ರಮುಖ ದಿನಾಂಕಗಳು

ಅಧಿಸೂಚನೆ ಬಿಡುಗಡೆ ದಿನಾಂಕ: 07-07-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2025 ಸಂಜೆ 5:30 ಗಂಟೆಯ ಒಳಗಾಗಿ.

Leave a Reply